ಕರ್ನಾಟಕ

ವಿಶ್ವನಾಥ್‍ರವರನ್ನು ಕರ್ತವ್ಯದಲ್ಲಿ ಮುಂದುವರಿಸದಿದ್ದಲ್ಲಿ ನ.10ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ :ಸುರೇಶ್

ರಾಜ್ಯ(ಮಡಿಕೇರಿ)ನ.3:- ಸೋಮವಾರಪೇಟೆಯ ಆಲೂರು-ಸಿದ್ದಾಪುರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್‍ರವರನ್ನು ಕರ್ತವ್ಯದಲ್ಲಿ ಮುಂದುವರೆಸದೇ ಹೋದಲ್ಲಿ ನ.10ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ತಾಲೂಕು ಅಧ್ಯಕ್ಷ ಟಿ.ಈ. ಸುರೇಶ್ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡ್ಲಿಪೇಟೆ ನಿವಾಸಿ ಎಂ.ಎನ್. ವಿಶ್ವನಾಥ್‍ರವರು ಆಲೂರು-ಸಿದ್ದಾಪುರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳೆದ 8 ವರ್ಷಗಳಿಂದ ಹಾಸನದ ಸೆಕ್ಯೂರಿಟಿ ಏಜೆನ್ಸಿಯೊಂದರ ಮೂಲಕ ಭದ್ರತಾ ಸಿಬ್ಬಂದಿಯಾಗಿ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಶಾಲೆಯ ಪ್ರಾಂಶುಪಾಲರು ಏಕಾಏಕಿ ಕೆಲಸಕ್ಕೆ ಬರಬಾರದೆಂದು ತಡೆಯೊಡ್ಡಿರುವುದನ್ನು ಒಕ್ಕೂಟ ಖಂಡಿಸುತ್ತದೆ. ಅವರನ್ನು ಕರ್ತವ್ಯದಲ್ಲಿ ಮುಂದುವರೆಸದೇ ಹೋದಲ್ಲಿ ಒಕ್ಕೂಟದ ವತಿಯಿಂದ ನ.10ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ತಾಲೂಕು ಪ್ರ.ಕಾರ್ಯದರ್ಶಿ ಜನಾರ್ಧನ್, ಉಪಾಧ್ಯಕ್ಷ ಜಗದೀಶ್, ಸದಸ್ಯ ವಿಜಯ್‍ಕುಮಾರ್ ಉಪಸ್ಥಿತರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: