ಕರ್ನಾಟಕ

ನ.5 ರಂದು ಎನ್‍ಟಿಎಸ್‍ಇ, ಎನ್‍ಎಂಎಂಎಸ್‍ ಪರೀಕ್ಷೆ

ಹಾಸನ (ನ.4): ನ.5 ರಂದು ಭಾನುವಾರ ಹಾಸನ ಜಿಲ್ಲೆಯ ಎಲ್ಲಾ ತಾಲ್ಲೂಕು ಹಂತದ ಪರೀಕ್ಷಾ ಕೇಂದ್ರಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಎನ್‍ಟಿಎಸ್‍ಇ ಪರೀಕ್ಷೆ 3238 ವಿದ್ಯಾರ್ಥಿಗಳು ಹಾಗೂ ಎನ್‍ಎಂಎಂಎಎಸ್‍ ಪರೀಕ್ಷೆಗೆ 4638 ವಿದ್ಯಾರ್ಥಿಗಳು ನೊಂದಾಯಿಸಿದ್ದು ಒಟ್ಟು 7876 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುತ್ತಿದ್ದು, ಪ್ರವೇಶ ಪತ್ರಗಳನ್ನು ಈಗಾಗಲೇ ವಿತರಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಉಸ್ತುವಾರಿಯಲ್ಲಿ ಪರೀಕ್ಷೆಯನ್ನು ಪೂರ್ವಸಿದ್ಧತೆಯೊಂದಿಗೆ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದ್ದು ಜಿಲ್ಲೆಯಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಯನ್ನು ತೆಗೆದುಕೊಂಡಿರುವ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ನಿಗದಿತ ಸಮಯಕ್ಕೆ ಹಾಜರಾಗುವಂತೆ ಡಯೆಟ್ ಉಪನಿರ್ದೇಶಕರಾದ ನಾಗೇಶ್ ಎಸ್.ಜಿ ತಿಳಿಸಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: