ಸುದ್ದಿ ಸಂಕ್ಷಿಪ್ತ

ನ. 5: ನಗರದಲ್ಲಿ ವಿದ್ಯುತ್ ವ್ಯತ್ಯಯ

ಚಾಮರಾಜನಗರ, ನ.4: – ನಗರದ ನ್ಯಾಯಾಲಯ ರಸ್ತೆ, ಹಳೆಯ ಡಿವೈಎಸ್‍ಪಿ ಪೊಲೀಸ್ ಠಾಣೆಯಿಂದ ಸತ್ಯಮಂಗಲ ರಸ್ತೆಯವರೆಗೆ ರಸ್ತೆ ಅಗಲೀಕರಣ ಮಾಡಲು ರಸ್ತೆ ಬದಿಯಲ್ಲಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿ ನವೆಂಬರ್ 5ರಂದು ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹೌಸಿಂಗ್ ಬೋರ್ಡ್ ಹಾಗೂ ನ್ಯಾಯಾಲಯ ರಸ್ತೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: