ಮೈಸೂರು

ಭ್ರಷ್ಟಾಚಾರ ಬೆಳೆಯಲು ಆದರ್ಶಗಳ ಕೊರತೆ ಕಾರಣ : ಪ್ರೊ.ಬಿ.ವಿ.ಸಾಂಬಶಿವಯ್ಯ.

ಭ್ರಷ್ಟಾಚಾರ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಜನರಲ್ಲಿ ನೈತಿಕತೆ ಮತ್ತು ಆದರ್ಶಗಳ ಕೊರತೆಯೇ ಕಾರಣ ಎಂದು ಜೆ.ಎಸ್.ಎಸ್.ಕಾಲೇಜಿನ ಮುಖ್ಯಕಾರ್ಯನಿರ್ವಾಹಕರಾದ ಪ್ರೊ.ಬಿ.ವಿ.ಸಾಂಬಶಿವಯ್ಯ ಅಭಿಪ್ರಾಯಪಟ್ಟರು.

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆ.ಎಸ್.ಎಸ್.ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿ ಲಿಮಿಟೆಡ್ ನ ನಹಯೋಗದಲ್ಲಿ ಹಮ್ಮಿಕೊಳ್ಳಲಾದ ಭ್ರಷ್ಟಾಚಾರ ವಿಚಕ್ಷಣಾ ಸಪ್ತಾಹದ ಪ್ರಯುಕ್ತ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಅತಿಯಾದ ನಿಯಮಗಳು ಇರುವಲ್ಲಿ ಭ್ರಷ್ಟರು ತಮ್ಮ ಕೆಲಸವನ್ನು ಹೇಗಾದರೂ ಸಾಧಿಸಿಕೊಳ್ಳಲು ಅನ್ಯಮಾರ್ಗಗಳನ್ನು ಹುಡುಕುತ್ತಾರೆ.  ಸಮಾಜದಲ್ಲಿ ಭ್ರಷ್ಟಾಚಾರ ಎಲ್ಲ ಕಾಲದಲ್ಲೂ ಇದ್ದೇ ಇದೆ. ಪ್ರಮಾಣದಲ್ಲಿ ಮಾತ್ರ ವ್ಯತ್ಯಾಸಗಳಾಗಿವೆ. ವಿದ್ಯಾರ್ಥಿಗಳು ಬದುಕಿನಲ್ಲಿ ಆದರ್ಶ, ಮೌಲ್ಯಗಳನ್ನು ಬೆಳೆಸಿಕೊಂಡು ಯಾವುದೇ ರೀತಿಯಲ್ಲಿ ಭ್ರಷ್ಟಾಚಾರಗಳಲ್ಲಿ ಭಾಗಿಗಳಾಗದಿರಲು ಪಣ ತೊಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿಯ ಅಧಿಕಾರಿ ಎಸ್.ಉದಯಕುಮಾರ್ ಮಾತನಾಡಿ ಇನ್ಶೂರೆನ್ಸಿನ ಕುರಿತು ಜನರಿಗೆ ಇನ್ನೂ ಹೆಚ್ಚಿನ ಜಾಗೃತೆ ಮೂಡಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಮಹದೇವಪ್ಪ, ಪ.ಪೂ ಕಾಲೇಜಿನ ಪ್ರಾಂಶುಪಾಲ ಎಸ್.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: