ಕರ್ನಾಟಕಪ್ರಮುಖ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬಹುಮಾನ : ಅರ್ಜಿ ಆಹ್ವಾನ

ಮೈಸೂರು (ನ.4): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2016 ರಿಂದ ಡಿಸೆಂಬರ್ 2016 ರ ಅವಧಿಯಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ಕಲಾವಿದರಿಗೆ, ಲೇಖಕರಿಗೆ ಅಥವಾ ಪ್ರಕಾಶಕರಿಗೆ ಕನ್ನಡ ಪುಸ್ತಕ ಸೊಗಸು-2016 ಬಹುಮಾನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಕಲಾವಿದರ ಹೆಸರು ಅಥವಾ ವಿಳಾಸ ಈ ಎಲ್ಲಾ ವಿವರ ಹಾಗೂ ಪುಸ್ತಕದ ಎರಡು ಪ್ರತಿಯೊಂದಿಗೆ ನವೆಂಬರ್ 20 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಈ ವಿಳಾಸಕ್ಕೆ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು ದೂರವಾಣಿ ಸಂಖ್ಯೆ 080-22484516 /22107704 ಅಥವಾ www.kannadapustakapradhikara.com ಅನ್ನು ಸಂಪರ್ಕಿಸಬಹುದಾಗಿದೆ.

(ಎನ್‍ಬಿಎನ್‍)

Leave a Reply

comments

Related Articles

error: