ಸುದ್ದಿ ಸಂಕ್ಷಿಪ್ತ

ಪ್ರಪಾತ ಕೃತಿ ಬಿಡುಗಡೆ ನ.12

ಮೈಸೂರು, ನ. 4 : ಅರಸು ಜಾಗೃತಿ ಅಕಾಡೆಮಿ, ಅರಸು ಪತ್ರಿಕೆ ಸಹಯೋಗದಲ್ಲಿ ನ.12ರ ಬೆಳಗ್ಗೆ 10.45ಕ್ಕೆ ದಿ ಇನ್ಸಿಟಿಟ್ಯೂಟ್ ಆಫ್ ಇಂಜಿನಿಯರ್ಸ್ ನಲ್ಲಿ ಬಿ.ಆರ್.ಜಯರಾಮರಾಜೇ ಅರಸ್ ಅವರ ಪ್ರಪಾತ ಕೃತಿ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್.ಕಾಂತರಾಜ ಕಾರ್ಯಕ್ರಮ ಉದ್ಘಾಟಿಸುವರು, ಮೈಲ್ಯಾಕ್ ಅಧ್ಯಕ್ಷ ಹೆಚ್.ಎ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು, ಮೈಸೂರು ವಿವಿಯ ಪ್ರೊ.ವೈ.ಎಸ್.ಸಿದ್ದೇಗೌಡ ಕೃತಿ ಲೋಕಾರ್ಪಣೆಗೊಳಿಸುವರು.

ವಾಣಿಜ್ಯ ಮತ್ತು ಕೈಗಾರಿಕ ಸಂಸ್ಥೆ ಅಧ್ಯಕ್ಷ ಎ.ಎಸ್.ಸತೀಶ್, ಸಂಧ್ಯಾ ಸುರಕ್ಷಾ ಟ್ರಸ್ಟ್ ಅಧ್ಯಕ್ಷ ಬಿ.ಆರ್.ನಟರಾಜ ಜೋಯಿಷ್, ದಾಸ್ತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಡಿ.ತಿಮ್ಮಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: