ಮೈಸೂರು

ದೇಶದ ಎಲ್ಲ ಹೆಣ್ಣುಮಕ್ಕಳಿಗೂ ಶಿಕ್ಷಣ ಲಭಿಸಬೇಕು: ಡಾ. ಪಿ. ಸೆಲ್ವಿದಾಸ್

ಬ್ರಿಟಿಷ್ ಆಳ್ವಿಕೆಯಲ್ಲಿ ಮಹಿಳಾ ಸಬಲೀಕರಣ ಇದ್ದರೂ, ಶ್ರೀಮಂತ ಹೆಣ್ಣುಮಕ್ಕಳು ಮಾತ್ರ ಶಿಕ್ಷಣ ಪಡೆಯಲು ಸಾಧ್ಯವಾಗಿತ್ತು. ಸ್ವಾತಂತ್ರ್ಯ ಪಡೆದ ನಂತರ ಹೆಣ್ಣುಮಕ್ಕಳು ಸಹಶಿಕ್ಷಣ ಪಡೆಯಲು ಡಾ. ಬಿ.ಆರ್. ಅಂಬೇಡ್ಕರ್ ಅವಕಾಶ ಒದಗಿಸಿದ್ದಾರೆ. ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳಿಗೂ ಸೂಕ್ತ ಶಿಕ್ಷಣ ಸಿಗಬೇಕು. ದೇಶದಲ್ಲಿ ಅಸಂಖ್ಯಾತ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ವಿವಿ ಕುಲಪತಿ ಡಾ. ಪಿ. ಸೆಲ್ವಿದಾಸ್ ಹೇಳಿದರು.

ಮೈಸೂರು ವಿಶ್ವವಿದ್ಯಾನಿಲಯದ ಯುಜಿಸಿ-ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಮತ್ತು ಇಂಗ್ಲಿಷ್ ಅಧ್ಯಯನ ವಿಭಾಗದ ವತಿಯಿಂದ ಬುಧವಾರ ಸಹಾಯಕ ಪ್ರಾಧ್ಯಾಪಕರಿಗಾಗಿ ಆಯೋಜಿಸಲಾಗಿದ್ದ ‘ಮಹಿಳೆ ಮತ್ತು ಸಾಹಿತ್ಯ’ ಕುರಿತ ಇಂಗ್ಲಿಷ್ ಪುನಶ್ಚೇತನ ಶಿಬಿರದಲ್ಲಿ ಮಾತನಾಡಿದರು.

ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಮಹಿಳೆಯರಿಗೆ ಸಮಾಜದಲ್ಲಿ ಸಮಾನ ಸ್ಥಾನಮಾನವನ್ನು ದೊರಕಿಸಿಕೊಟ್ಟಿದ್ದರೂ, ಈಗಲೂ ಅಸಂಖ್ಯಾತ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳಿಗೂ ಸೂಕ್ತ ಶಿಕ್ಷಣ ನೀಡುವಂತಾಗಬೇಕು ಎಂದು ಅವರು ಹೇಳಿದರು.

ಇಂಗ್ಲಿಷ್ ಅಧ್ಯಯನ ವಿಭಾಗದ ಅಧ್ಯಕ್ಷೆ ಪ್ರೊ. ಕೆ.ಟಿ. ಸುನೀತಾ, ಯುಜಿಸಿ-ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ನಿರ್ದೇಶಕಿ ಪ್ರೊ. ಮಿಡತಲ ರಾಣಿ, ಶಿಬಿರ ಸಂಯೋಜಕಿ ಡಾ. ದೇವಿಕಾ ರಾಣಿ ಇದ್ದರು.

Leave a Reply

comments

Related Articles

error: