ಮೈಸೂರು

ಬಸ್‍ ಪಲ್ಟಿ: ಸುಮಾರು 30 ಮಂದಿಗೆ ಗಾಯ

ಮೈಸೂರಿನ ಸುತ್ತೂರು ರಸ್ತೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮದುವೆ ಮುಗಿಸಿ ಉಮ್ಮತ್ತೂರು ಗ್ರಾಮಕ್ಕೆ ಬಸ್ ತೆರಳುತ್ತಿತ್ತು. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: