ಮೈಸೂರು

ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ : ಮೈಸೂರು ಜಿಲ್ಲಾ ವಿವರ

ಮೈಸೂರು (ನ.4): ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ವೇಳಾಪಟ್ಟಿ ಪ್ರಕಟಿಸಿದೆ.

ನಮೂನೆ 19ರಲ್ಲಿ ಅರ್ಜಿ ಸಲ್ಲಿಸುವ ನವೆಂಬರ್ 7 ಕೊನೆಯ ದಿನಾಂಕವಾಗಿರುತ್ತದೆ. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 21ರಂದು ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿಸಂಬರ್ 21 ರವರಗೆ ಸಲ್ಲಿಸಬಹುದಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಜನವರಿ19 ರಂದು ಪ್ರಕಟಿಸಲಾಗುವುದು.

ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಪದವೀಧರರ ಕ್ಷೇತ್ರದಿಂದ ಚುನಾವಣೆ ಸಂಬಂಧ ಮತದಾರರ ಪಟ್ಟಿಯನ್ನು ತಯಾರಿಸಲು ಹಕ್ಕುಳ್ಳ ವ್ಯಕ್ತಿಗಳು ನಮೂನೆ 19 ರಲ್ಲಿ ದಿನಾಂಕ: 07.11.2017ರವರಗೆ ಸಂಬಂಧಪಟ್ಟ ಸಹಾಯಕ ಮತದಾರರ ನೊಂದಣಾಧಿಕಾರಿ, ನಿಯೋಜಿತ ಅಧಿಕಾರಿಗಳಿಗೆ ನೀಡಬಹುದಾಗಿದೆ.
ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರತಿ ಚುನಾವಣೆಯ ಮೊದಲು ಹೊಸದಾಗಿ ತಯಾರಿಸಬೇಕಾಗಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿರುವ ಎಲ್ಲಾ ವ್ಯಕ್ತಿಗಳು ಸಹ ನಿಗದಿತ ನಮೂನೆಯಲ್ಲಿ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಜಿಸಲ್ಲಿಸಲು ಬೇಕಾಗಿರವ ಅರ್ಹತೆಗಳು: ಭಾರತದ ಪ್ರಜೆಯಾಗಿರಬೇಕು, ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರಬೇಕು (ವಾಸವಿರುವ ಬಗ್ಗೆ ಗುರುತಿನ ಚೀಟಿ), 1ನೇ ನವೆಂಬರ್ 2017ಕ್ಕೆ ಮೊದಲು ಆರು ವರ್ಷಗಳ ಅವಧಿಯಲ್ಲಿ ಕನಿಷ್ಟ ಒಟ್ಟು 3 ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಿಲ್ಲದ ನಿರ್ದಿಷ್ಟಪಡಿಸಿದಂತ ರಾಜ್ಯದೊಳಗಿನ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.

ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ತಾನು ಹಿಂದಿನ ಆರು ವರ್ಷಗಳಲ್ಲಿ ಒಟ್ಟು ಮೂರು ವರ್ಷಗಳು ಶಿಕ್ಷಕನಾಗಿ ಸೇವೆ ಸಲ್ಲಿಸಿರುವ ಕುರಿತು ಅರ್ಜಿಯೊಂದಿಗೆ ಪ್ರಮಾಣ ಪತ್ರವನ್ನು ಲಗತ್ತಿಸಿ ಸಲ್ಲಿಸತಕ್ಕದ್ದು.

ಮೈಸೂರು ನಗರ ವ್ಯಾಪ್ತಿಗೆ ಬರುವ ಶಿಕ್ಷಕರ ಕ್ಷೇತ್ರದ ಮತದಾರರು ಮಹಾನಗರ ಪಾಲಿಕೆ ಚುನಾವಣೆ ಶಾಖೆ ಕಚೇರಿಯಲ್ಲಿ ಮತ್ತು ತಾಲ್ಲೂಕು ವ್ಯಾಪ್ತಿ ಬರುವ ಶಿಕ್ಷಕರ ಕ್ಷೇತ್ರದ ಮತದಾರರು ಆಯಾಯ ತಾಲ್ಲೂಕು ಕಚೇರಿಯಲ್ಲಿನ ಸಹಾಯಕ ನೋಂದಣಾಧಿಕಾರಿ, ನಿಯೋಜಿತ ಅಧಿಕಾರಿಗಳಿಂದ ಅರ್ಜಿಗಳನ್ನು ಪಡೆಯಬಹುದು ಹಾಗೂ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೈಸೂರು ನಗರದ 65 ವಾರ್ಡ್‍ಗಳ ವ್ಯಾಪ್ತಿಗೆ ಬರುವ ಶಿಕ್ಷಕರ ಕ್ಷೇತ್ರದ ಮತದಾರರು-0821-2418860, ಮೈಸೂರು ತಾಲ್ಲೂಕು¬-0821-2414811, ಟಿ.ನರಸೀಪುರ-08227-261233, ನಂಜನಗೂಡು-08221-226002, ಪಿರಿಯಾಪಟ್ಟಣ-08223-274175, ಕೆ.ಆರ್.ನಗರ-08223-262371, ಹುಣಸೂರು-08222-252040, ಹೆಚ್.ಡಿ.ಕೋಟೆ-08228-255325 ಯನ್ನು ಸಂಪರ್ಕಿಸುವುದು.

(ಎನ್‍ಬಿಎನ್‍)

Leave a Reply

comments

Related Articles

error: