ಕರ್ನಾಟಕಪ್ರಮುಖ ಸುದ್ದಿ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಖಚಿತ : ಭವಾನಿ ರೇವಣ್ಣ

ರಾಜ್ಯ(ಹಾಸನ)ನ.6:- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸೋದು ಖಚಿತ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ಹಾಸನದ ಹರದನಹಳ್ಳಿಯಲ್ಲಿ ಸೋಮವಾರ ಮಾತನಾಡಿದ ಭವಾನಿ ರೇವಣ್ಣ, 2018ರ ವಿಧಾನಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಹೆಚ್,ಡಿ ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಅವರೇ ನಿರ್ಧರಿಸುತ್ತಾರೆ. ಬೇಲೂರು, ರಾಜರಾಜೇಶ್ವರಿನಗರ ಕ್ಷೇತ್ರದ ವಾತಾವರಣ ಚೆನ್ನಾಗಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರು,ತಮ್ಮ ಕುಟಂಬದಿಂದ ಇಬ್ಬರು ಮಾತ್ರ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದರು. ಇದೀಗ ಭವಾನಿ ರೇವಣ್ಣ ಅವರು ತಮ್ಮ ಪುತ್ರನ ಸ್ಪರ್ಧೆ ಬಗ್ಗೆ ಖಚಿತಪಡಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: