ಪ್ರಮುಖ ಸುದ್ದಿಮೈಸೂರು

ಟಿಪ್ಪು ಜಯಂತಿಗೆ ವಿರೋಧ: ಮೈಸೂರು ಬಿಜೆಪಿಯಿಂದ ಕರಾಳ ದಿನಾಚರಣೆ

ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಿಸುತ್ತಿರುವುದನ್ನು ವಿರೋಧಿಸಿ 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು.

ಸಂಸದ ಪ್ರತಾಪ್ ಸಿಂಹ, ನಗರಾಧ್ಯಕ್ಷ ಡಾ.ಮಂಜುನಾಥ್, ಮಾಜಿ ಎಂಎಲ್‍ಸಿ ಗೋ ಮಧುಸೂದನ್, ಮಾಜಿ ಶಾಸಕ ವಿಜಯಶಂಕರ್, ಬಿಜೆಪಿ ಮುಖಂಡರಾದ ನಂದೀಶ್ ಪ್ರೀತಂ, ಮಲ್ಲಪ್ಪಗೌಡ ಮೊದಲಾದವರು ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ಕರಾಳ ದಿನವನ್ನಾಚರಿಸಿದರು.

ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯ ಅವಶ್ಯಕತೆಯಿರಲಿಲ್ಲ. ಆದರೂ, ರಾಜ್ಯ ಸರಕಾರ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು ಟಿಪ್ಪು ಮತ್ತು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜಿಲ್ಲಾಧಿಕಾರಿ ಬಳಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿಸಿಪಿ ಶೇಖರ್ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿ ಸಂಸದ ಪ್ರತಾಪ್ ಸಿಂಹ ಸೇರಿ 50ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ಸಿ.ಎ.ಆರ್. ಗ್ರೌಂಡ್‍ಗೆ ಕರೆದೊಯ್ಯಲಾಯಿತು.

bjp-protest-1

Leave a Reply

comments

Related Articles

error: