Uncategorized

ಟಿಪ್ಪು ಜಯಂತಿ : ಪ್ರಜ್ಞಾವಂತ ಸ್ವಾಭಿಮಾನಿ ಮಹಿಳಾ ಸಂಘಟನೆ ವಿರೋಧ

ರಾಜ್ಯ(ಮಡಿಕೇರಿ) ನ.7 :-  ಅಲ್ಪಸಂಖ್ಯಾತರ ಓಲೈಕೆಯ ದೃಷ್ಟಿಯಿಂದ ಟಿಪ್ಪು ಜಯಂತಿಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಕಾವೇರಿ ಮಾತಾ ಪ್ರಜ್ಞಾವಂತ ಸ್ವಾಭಿಮಾನಿ ಮಹಿಳಾ ಸಂಘಟನೆ, ಜಿಲ್ಲೆಯ ಜನರ ಭಾವನೆಗೆ ವಿರುದ್ಧವಾಗಿ ಜಯಂತಿ ಆಚರಿಸಬಾರದೆಂದು ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪ್ರಮುಖರಾದ ಕಾಂತಿ ಸತೀಶ್, ಇತಿಹಾಸದ ಪುಟಗಳಲ್ಲಿ ಟಿಪ್ಪು ಸುಲ್ತಾನ್ ನಡೆಸಿರುವ ದುಷ್ಕೃತ್ಯಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೂ ರಾಜ್ಯ ಸರ್ಕಾರ ಮತ ಬ್ಯಾಂಕ್‍ಗಾಗಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವುದು ಖಂಡನೀಯ. ಇದು ಪ್ರಜ್ಞಾವಂತ ನಾಗರಿಕ ಸಮಾಜ ತಲೆತಗ್ಗಿಸುವ ಕಾರ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಿಪ್ಪು ಜಯಂತಿಯನ್ನು ವಿರೋಧಿಸಿ ಜಿಲ್ಲೆಯ ಮಹಿಳಾ ಸಮೂಹ ವಿಭಿನ್ನ ಮತ್ತು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಲಿದೆ. ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆಯಾದರು, ಜಯಂತಿಯನ್ನು ವಿರೋಧಿಸಲು ನಮ್ಮ ಸಂಘಟನೆ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಸದಸ್ಯರಾದ ಅನಿತಾ ಪೂವಯ್ಯ,ಗೀತಾ ಪವಿತ್ರ ಮಿನಾಜ್ ಪ್ರವೀಣ್, ಬಲ್ಲಡಿಚಂಡ ಸೀತಮ್ಮ ಸೋಮಯ್ಯ ಹಾಗೂ ಮಾಚೆಟ್ಟಿರ ಮಾಲಾ ಉಪಸ್ಥಿತರಿದ್ದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: