ಸುದ್ದಿ ಸಂಕ್ಷಿಪ್ತ

ಕಲಾಶ್ರೀ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಸೋಮವಾರಪೇಟೆ,7:-  ಜಿಲ್ಲಾ ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಸೃಜನಾತ್ಮಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಸಾಂಧೀಪನಿ ಶಾಲೆಯ ವಿದ್ಯಾರ್ಥಿನಿ ಸಿ.ಪಿ. ಶ್ರೀಲಕ್ಷ್ಮಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿಯು ಇತ್ತೀಚೆಗೆ ಮಡಿಕೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಲಾಶ್ರೀ ಆಯ್ಕೆ ಶಿಬಿರದಲ್ಲಿ ಸೃಜನಾತ್ಮಕ ಪ್ರದರ್ಶನ ಕಲೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ವಕೀಲರಾದ ಕೆ.ಎಸ್. ಪದ್ಮನಾಭರವರ ಪುತ್ರಿಯಾಗಿದ್ದಾಳೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: