ಮೈಸೂರು

ಟಿಪ್ಪು ಜಯಂತಿ ಹಿನ್ನೆಲೆ : ಪೊಲೀಸರಿಂದ ಪಥ ಸಂಚಲನ

ಮೈಸೂರು,ನ.8:-ಟಿಪ್ಪು ಜಯಂತಿಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಕಟ್ಟೆಚ್ಚರವಹಿಸಲಾಗಿದ್ದು,  ಪೊಲೀಸರು ಪಥಸಂಚಲನ ನಡೆಸಿದರು.

ನಗರದ ಸೂಕ್ಷ್ಮ ಪ್ರದೇಶಗಳ ಮುಖ್ಯ ರಸ್ತೆಗಳಲ್ಲಿ  ಹಾಗೂ ಎನ್.ಆರ್,  ಉದಯಗಿರಿ, ಮಂಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯ ರಸ್ತೆಗಳಲ್ಲಿ  ಡಿಸಿಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು.  ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಎಲ್ಲಾ ಪೊಲೀಸ್ ತುಕಡಿಗಳು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವು. ಟಿಪ್ಪು ಜಯಂತಿ ಆಚರಣೆ ನೆಪದಲ್ಲಿ ಸಮಾಜದಲ್ಲಿ ಶಾಂತಿ ಕದಡಲು ಮುಂದಾಗುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು. ಜನ ಸಾಮಾನ್ಯರ ರಕ್ಷಣೆಗೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: