ಸುದ್ದಿ ಸಂಕ್ಷಿಪ್ತ
ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಚಾಮರಾಜನಗರ,ನ.9-ನವೋದಯ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪ್ರಾಚಾರ್ಯರು, ಹೊಂಡರಬಾಳು ನವೋದಯ ಶಾಲೆಗೆ ತಲುಪಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ-ವಿಎಸ್ಎಸ್, ಎಂ.ಎನ್)