ಮೈಸೂರು

ಶ್ರೀ ನಂದಿಗೆ 11ನೇ ವರ್ಷದ ಮಹಾಭಿಷೇಕ ನ.13ರಂದು

ಬೆಟ್ಟದ ಬಳಗ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.13 ರಂದು ಕಾರ್ತಿಕ ಮಾಸದ ಪ್ರಯುಕ್ತ ಚಾಮುಂಡಿಬೆಟ್ಟದ ಶ್ರೀ ನಂದಿಗೆ 11 ನೇ ವರ್ಷದ  ಮಹಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಕಾರ್ಯದರ್ಶಿ ಎನ್. ಗೋವಿಂದ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಂದು ಬೆ.10.30ಕ್ಕೆ ಮಹಾಭಿಷೇಕ, ಪೂಜಾಮಹೋತ್ಸವ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ಸುತ್ತೂರು ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಮೈಸೂರು ಹೊಸಮಠದ ಶ್ರೀ ಚಿದಾನಂದ ಸ್ವಾಮಿ, ಆದಿಚುಂಚನಗಿರಿ ಮಠದ ಶ್ರೀ ಸೋಮನಾಥಾನಂದ ಸ್ವಾಮಿ, ಶ್ರೀ ಜಮನಗಿರಿ ಸ್ವಾಮಿ ಇವರ ಸಮ್ಮುಖದಲ್ಲಿ ನೆರವೇರಿಸಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡೊಳ್ಳು ಕುಣಿತ ಕಾರ್ಯಕ್ರಮವಿರುತ್ತದೆ. ನಂತರ ಮಧ್ಯಾಹ್ನ 12 ಗಂಟೆಗೆ ಪ್ರಸಾದ ವಿನಿಯೋಗವಿರುತ್ತದೆ ಎಂದು ತಿಳಿಸಿದರು.

ನ.14 ರಂದು ಸಂಜೆ 6.30 ಕ್ಕೆ ಜೆಎಸ್ಎಸ್ ಆಸ್ಪತ್ರೆ ನೌಕರರ ವತಿಯಿಂದ  ಶ್ರೀ ನಂದಿಯ ಆವರಣದಲ್ಲಿ ದೀಪೋತ್ಸವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ನ ಅಧ್ಯಕ್ಷ  ಎಸ್.ಪ್ರಕಾಶನ್, ಖಜಾಂಚಿ ವಿ.ಎನ್.ಸುಂದರ್, ಶೇಖರ್ ಮತ್ತು ನವೀನ್ ಇದ್ದರು.

Leave a Reply

comments

Related Articles

error: