ಮೈಸೂರು

ಮೈಸೂರು ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ ನ.12 ರಂದು

6 ನೇ ಮೈಸೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನ.12 ರಂದು ಆಲನಹಳ್ಳಿಯ ಎಸ್. ಎನ್.ಎಸ್. ಶಾಲೆ ಮುಂಭಾಗ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಈ ಕಾರ್ಯಕ್ರಮವನ್ನು ಅಂದು ಬೆ.8 ಗಂಟೆಗೆ ಧ್ವಜಾರೋಹಣ ಮಾಡಲಾಗುತ್ತದೆ. ನಂತರ ಸಮ್ಮೇಳನಾಧ್ಯಕ್ಷರ ಮೆರವಣಿಗೆ  ಸಾಗಿ ತಾ.ಪಂ. ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಕಾರ್ಯಕ್ರಮ ಉದ್ಘಾಟಿಸುತ್ತಾರೆ. 10.30 ಕ್ಕೆ ಉದ್ಘಾಟನಾ ಸಮಾರಂಭವನ್ನು ಹೆಸರಾಂತ ಕವಿ ಡಾ.ದೊಡ್ಡರಂಗೇಗೌಡ ಉದ್ಘಾಟಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ ನೆರವೇರಿಸಲಿದ್ದಾರೆ.  ಸಮ್ಮೇಳನದ ಅಧ್ಯಕ್ಷರಾದ ಎಸ್.ಬಸವರಾಜು ಕುಕ್ಕರಹಳ್ಳಿ ಸಮ್ಮೇಳನಾಧ್ಯಕ್ಷರ ನುಡಿಗಳಾಡಲಿದ್ದಾರೆ. ಮ.2.30 ಕ್ಕೆ  ವಿಚಾರ ಗೋಷ್ಠಿ ಕಾರ್ಯಕ್ರಮವಿರುತ್ತದೆ.  ಸಂಜೆ 4.30 ಕ್ಕೆ ಸಾಧಕರನ್ನು ಸನ್ಮಾನಿಸಲಾಗುತ್ತದೆ. 5.30 ಕ್ಕೆ ಸಮಾರೋಪ ಸಮಾರಂಭವಿರುತ್ತದೆ ಎಂದು  ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಅನೇಕ ಜನಪ್ರತಿನಿಧಿಗಳು, ಸಮಾಜ ಸೇವಕರು ಭಾಗಿಯಾಗಲಿದ್ದಾರೆ. ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಮೈಸೂರು ತಾಲೂಕು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಎಸ್.ಎನ್.ಗುರುಸ್ವಾಮಿ ಅವರಿಂದ ಮಾತನಾಡುವ ಗೊಂಬೆ ಹಾಗೂ ಜಾದೂ ಪ್ರದರ್ಶನವಿರುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಕ.ಸಾ.ಪ. ಅಧ್ಯಕ್ಷ ಎಸ್.ಶಿವಮೂರ್ತಿ ಕಾನ್ಯ, ಕಾರ್ಯದರ್ಶಿ ದೊರೆಸ್ವಾಮಿ, ಬಿ.ಎಂ.ರಾಮಚಂದ್ರ, ಆಲನಹಳ್ಳಿ ಮೂರ್ತಿ ಮತ್ತು ಚಂದ್ರಶೇಖರ್ ಆರಾಧ್ಯ ಹಾಜರಿದ್ದರು.

Leave a Reply

comments

Related Articles

error: