ಸುದ್ದಿ ಸಂಕ್ಷಿಪ್ತ
ಸಾಧಕರಿಗೆ ಧ್ವನಿ ಕೊಟ್ಟ ಧಣಿ ಪ್ರಶಸ್ತಿ ಪ್ರದಾನ ನ.12
ಮೈಸೂರು, ನ. 9 : ಅರಸು ಜಾಗೃತಿ ಅಕಾಡೆಮಿಯು 62ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರಿಗೆ ಧ್ವನಿಕೊಟ್ಟ ಧಣಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.12ರ ಬೆಳಗ್ಗೆ 11 ಗಂಟೆಗೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ಆಯೋಜಿಸಿದೆ.
ಕಾರ್ಯಕ್ರಮದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್.ಕಾಂತರಾಜು ಅಧ್ಯಕ್ಷತೆ ವಹಿಸುವರು, ನಿವೃತ್ತ ಐ.ಎ.ಎಸ್ ಅಧಿಕಾರಿ ಜಯರಾಮರಾಜೇ ಅರಸ್ ಪ್ರಶಸ್ತಿ ಪ್ರಧಾನ ಮಾಡುವರು ಎಂದು ಗೌರವಾಧ್ಯಕ್ಷ ಡಾ.ಎಂ.ಜಿ.ಆರ್ ಅರಸ್ ಪ್ರಕಟಿಸಿದ್ದಾರೆ. (ಕೆ.ಎಂ.ಆರ್)