ಸುದ್ದಿ ಸಂಕ್ಷಿಪ್ತ

ನ. 10:  ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಚಾಮರಾಜನಗರ, ನ. 9 – ಸಕ್ಕರೆ, ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಗೀತಾ ಮಹದೇವ ಪ್ರಸಾದ್ ಅವರು ನವೆಂಬರ್ 10ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 9.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವರು. ಬಳಿಕ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ತದನಂತರ  ನಗರದ ಡಿ. ದೇವರಾಜ ಅರಸು ಭವನದಲ್ಲಿ ನಡೆಯಲಿರುವ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ 5 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ವಿಶೇಷಾಧಿಕಾರಿ ತಿಳಿಸಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: