ಕರ್ನಾಟಕಮೈಸೂರು

ಇಂದು ಮಂಡ್ಯ ಜಿಲ್ಲೆಯಾದ್ಯಂತ ಸಭೆ-ಸಮಾರಂಭಗಳಿಗೆ ನಿಷೇಧಾಜ್ಞೆ : ಜಿಲ್ಲಾಧಿಕಾರಿ ಆದೇಶ

ಮಂಡ್ಯ (ನ.10): ನವೆಂಬರ್ 10 ರಂದು ಜಿಲ್ಲಾಡಳಿದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿರುವ ಟಿಪ್ಪು ಜಯಂತಿ ಆಚರಣೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ, ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ಹೊರತುಪಡಿಸಿ ಇನ್ಯಾವುದೇ ಸಾರ್ವಜನಿಕ ಸಭೆ, ಖಾಸಗಿ ಸಮಾರಂಭ, ವಾಹನ ರ್ಯಾಲಿ, ಬಾವುಟ ಜಾಥಾ. ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಆದೇಶ ಹೊರಡಿಸಿದ್ದಾರೆ.

ನವೆಂಬರ್ 9ರ ಸಂಜೆ 6 ಗಂಟೆಯಿಂದ ನವೆಂಬರ್ 11 ರ ಬೆಳಿಗ್ಗೆ 6 ಗಂಟೆಯವರೆಗೆ ಶ್ರೀರಂಗಪಟ್ಟಣ ಟೌನ್ ಮತ್ತು ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿ, ಮಂಡ್ಯ ನಗರ, ಮದ್ದೂರು, ಮಳವಳ್ಳಿ, ನಾಗಮಂಗಲ, ಬೆಳ್ಳೂರು, ಪಾಂಡವಪುರ ಮತ್ತು ಕೆ.ಆರ್.ಪೇಟೆ ಪಟ್ಟಣಗಳ ವ್ಯಾಪ್ತಿಯಲ್ಲಿ ಯಾವುದೇ ಸಂಘಟನೆಗಳ ಆಯೋಜಕರು, ಕಾರ್ಯಕರ್ತರು, ಸದಸ್ಯರು ಯಾವುದೇ ವ್ಯಕ್ತಿಗಳು ಯಾವುದೇ ರೀತಿಯ ದ್ವಿಚಕ್ರ ವಾಹನ, ಬೈಕ್ ಇತ್ಯಾದಿ ಹಾಗೂ ಇತರೆ ಯಾವುದೇ ವಾಹನಗಳ ಮೂಲಕ ರ್ಯಾಲಿ, ಬಾವುಟ ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ, ಖಾಸಗಿ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿರುವ ಪ್ರಸ್ತಾವನೆ ಹಾಗೂ ಶಿಫಾರಸ್ಸಿನ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಮತ್ತು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗರೂಕತೆ ಕ್ರಮ ವಹಿಸಲು ನಿಷೇದಾಜ್ಞೆ ಹೊರಡಿಸುವುದು ಸೂಕ್ತವೆಂದು ಕರ್ನಾಟಕ ಪೊಲೀಸ್ ಕಾಯಿದೆ ಕಲಂ 35 ರ ಅಡಿಯಲ್ಲಿ ನಿಷೇದಾಜ್ಞೆ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ತಿಳಿಸಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: