ಕರ್ನಾಟಕ

ನ.11-14 : ಮಕ್ಕಳ ಹಬ್ಬ ಮತ್ತು ಮಕ್ಕಳ ದಿನಾಚರಣೆ

ಬೆಂಗಳೂರು (ನ.10): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ನ.11 ರಿಂದ 14 ರವರೆಗೆ ಮಕ್ಕಳ ಹಬ್ಬ ಮತ್ತು ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಬಾಲಭವನ ಮತ್ತು ಕಬ್ಬನ್ ಉದ್ಯಾನವನದ ಆವರಣದಲ್ಲಿ ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಶ್ರೀಮತಿ ಉಮಾಶ್ರೀ ಅವರು ಉದ್ಫಾಟಿಸಲಿದ್ದಾರೆ. ನಾಲ್ಕು ದಿನಗಳ ಕಾಲ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಹಳ್ಳಿ ಆಟ, ಬೀದಿನಾಟಕ, ಚಿತ್ರಕಲಾ ಸ್ಪರ್ಧೆ, ಚಿತ್ರ ಸಂತೆ, ಫಲಪುಷ್ಪ ಪ್ರದರ್ಶನ ಇತ್ಯಾದಿಗಳನ್ನು ಆಯೋಜಿಸಲಾಗಿದೆ.

ನ.14 ರಂದು ಆಚರಿಸಲಾಗುವ ಮಕ್ಕಳ ದಿನಾಚರಣೆಯನ್ನು ಗೌರವಾನ್ವಿತ ರಾಜ್ಯಪಾಲರು ಉದ್ಫಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶೌರ್ಯ ಪ್ರಶಸ್ತಿ, ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಪುರಸ್ಕಾರ, ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಂಸ್ಥೆ ಮತ್ತು ವ್ಯಕ್ತಿಗಳಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

(ಎನ್‍ಬಿಎನ್‍)

Leave a Reply

comments

Related Articles

error: