ಮೈಸೂರು

ರೈತರ ಸಮಸ್ಯೆಗೆ ಸ್ಪಂದಿಸಿ: ಅಧಿಕಾರಿಗಳಿಗೆ ಕಾಗೋಡು ಕರೆ

ಕಂದಾಯ ಸಚಿವರಾಗಿ ಇದೇ ಪ್ರಥಮಬಾರಿಗೆ ಜಿಲ್ಲೆಗೆ ಆಗಮಿಸಿದ ಕಾಗೋಡು ತಿಮ್ಮಪ್ಪ ಅವರು, ಮೈಸೂರು, ಹುಣಸೂರು, ಎಚ್.ಡಿ.ಕೋಟೆಯ ಕಂದಾಯಾಧಿಕಾರಿಗಳ ಜೊತೆ ಸಭೆ ನಡೆಸಿದರು.

ವಿನೋಬಾ ರಸ್ತೆಯಲ್ಲಿರುವ ಚಾಮುಂಡೇಶ್ವರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಹೆಚ್.ಡಿ.ಕೋಟೆಯಲ್ಲಿ ಕೆಲವು ರೈತರು ಸರ್ಕಾರಿ ಜಮೀನು ಹಾಗೂ ಅರಣ್ಯ ಪ್ರದೇಶಗಳನ್ನು ಕಾನೂನು ಬಾಹಿರವಾಗಿ ಕೈವಶ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ನೇರವಾಗಿ ಇದಕ್ಕೆ ರೈತರನ್ನು ಹೊಣೆ ಮಾಡಲು ಸಾಧ್ಯವಿಲ್ಲ. ಸಂಬಂಧಪಟ್ಟವರ ಜೊತೆ ಈ ಕುರಿತು ಚರ್ಚಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದರು. ಕಂದಾಯ ಇಲಾಖೆಯಲ್ಲಿ ರೈತರ ಸಮಸ್ಯೆಗೆ ಸ್ಪಂದಿಸಿ 7 ದಿನಗಳೊಳಗಾಗಿ ಅವರ ಕೆಲಸಗಳು ನಡೆಯುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

ಎಡಿಸಿ ವೆಂಕಟೇಶ್, ಹುಣಸೂರು ಶಾಸಕ ಎಚ್.ಪಿ. ಮಂಜುನಾಥ್, ಎಚ್.ಡಿ. ಕೋಟೆ ಶಾಸಕ ಚಿಕ್ಕಮಾದು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

comments

Tags

Related Articles

error: