ಸುದ್ದಿ ಸಂಕ್ಷಿಪ್ತ

ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗ ಸಭೆ ನ.11

ಮೈಸೂರು, ನ. 10 : ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕಾಸಿಯಾ ಬೆಂಗಳೂರು ಸಹಯೋಗದಲ್ಲಿ ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗ ಸಭೆ 2017 ನ.11ರಂದು ಹೆಬ್ಬಾಳ ಕೈಗಾರಿಕಾ ಪ್ರದೇಶದ ಮೈಸೂರು ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ ಕಟ್ಟಡದಲ್ಲಿ ಆಯೋಜಿಸಿದೆ.

ಬೆಳಗ್ಗೆ 11 ಕ್ಕೆ ನಡೆಯುವ ಉದ್ಘಾಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರಾದ ಡಾ.ಮೋಹನ ಕುಮಾರಿ,  ತನ್ವೀರ್ ಸೇಠ್, ಎಂ.ಆರ್.ಸೀತಾರಾಮ್, ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಭಾಗಿಯಾಗುವರು, ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸುವರು.

ಸಂಸದರಾದ ಪ್ರತಾಪ್ ಸಿಂಹ, ಆರ್.ದೃವನಾರಾಯಣ್, ಪುಟ್ಟರಾಜು, ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಹೆಚ್.ಪಿ.ಮಂಜುನಾಥ್, ಸಾ.ರಾ.ಮಹೇಶ್ ಮೊದಲಾದ ಜನಪ್ರತಿನಿಧಿಗಳು ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: