ಮೈಸೂರು

ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಅರೆನಗ್ನ ಚಿತ್ರ ವೀಕ್ಷಣೆ: ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಪ್ರತಿಪಕ್ಷಗಳ ಒತ್ತಾಯ

ರಾಯಚೂರು:  ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಟಿಪ್ಪು ಜಯಂತಿ ಆಚರಣೆ ವೇಳೆ ಯುವತಿಯರ ಅರೆನಗ್ನ ಚಿತ್ರ ವೀಕ್ಷಣೆ ಮಾಡಿರುವ ಘಟನೆ ವರದಿಯಾಗಿದೆ.

ರಾಯಚೂರಿನ ರಂಗಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ಆಸೀನರಾಗಿದ್ದ ಸಚಿವರು, ಮೊಬೈಲ್ ನಲ್ಲಿ ಅರೆ ನಗ್ನ ಚಿತ್ರ ವೀಕ್ಷಿಸುತ್ತಿದ್ದುದು ಖಾಸಗಿ ಸುದ್ದಿವಾಹಿನಿಗಳಲ್ಲಿ ಬಿತ್ತರಗೊಂಡಿವೆ. ಸಚಿವರ ಈ ವರ್ತನೆಯನ್ನು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ತೀವ್ರವಾಗಿ ಖಂಡಿಸಿದ್ದು, ತನ್ವೀರ್ ಸೇಠ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿವೆ.

ವರತಿ ಬಂದ ನಂತರ ಪ್ರತಿಕ್ರಿಯೆ:

ಈ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರು ವರದಿ ಬಂದ ನಂತರ ಉತ್ತರಿಸುವುದಾಗಿ ಪ್ರತಿಕ್ರಿಯಿಸಿದ್ದಾರೆ.

Leave a Reply

comments

Related Articles

error: