ಕರ್ನಾಟಕ

ಇಂದು ಹಾಸನದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

ಹಾಸನ (ನ.11): ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.11 ರಂದು ಮಧ್ಯಾಹ್ನ 3 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಾಹಿತಿಗಳು ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಬೇಲೂರು ಕೃಷ್ಣ ಮೂರ್ತಿ ನೆರವೇರಿಸುವರು. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನಾಯಕರಹಳ್ಳಿ ಮಂಜೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಕಾರ್ಯಕ್ರಮದ ಕುರಿತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರವಿ ನಾಕಲಗೂಡು ಆಶಯ ನುಡಿಗಳನಾಡುವರು. ಉಪವಿಭಾಗಾಧಿಕಾರಿಗಳಾದ ಡಾ.ಹೆಚ್.ಎಲ್.ನಾಗರಾಜು ಅವರು ಪ್ರಧಾನ ಭಾಷಣ ಮಾಡುವರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತ ದೇವರಾಜು, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಹೆಚ್.ಪಿ.ಮೋಹನ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಆರ್.ಕೃಷ್ಣಕುಮಾರ್ ಪ್ರಶಸ್ತಿ ಪ್ರಧಾನ ಮಾಡುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ.ಜಾನಕಿ ಅವರು ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡುವರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷರಾದ ಡಾ. ಹೆಚ್.ಎಸ್.ಅನಿಲ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ನಾಗರಾಜು, ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿಗಳಾದ ಜಾವಗಲ್ ಪ್ರಸನ್ನ ಕುಮಾರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಜಿ.ಓ.ಮಹಾಂತಪ್ಪ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ನಾಗರಾಜು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜಿಲ್ಲಾ ಪ್ರತಿನಿಧಿ ಅಡಗೂರು ಕೇಶವಮೂರ್ತಿ ಭಾಗವಹಿಸುವರು.

(ಎನ್‍ಬಿಎನ್‍)

Leave a Reply

comments

Related Articles

error: