ಮೈಸೂರು

ಎಸ್ ಜೆಸಿಇಯಲ್ಲಿ ಪದವಿ ಪ್ರದಾನ : ವಿದ್ಯಾರ್ಥಿಗಳಿಂದ ಪ್ರತಿಜ್ಞಾ ಸ್ವೀಕಾರ

ಮೈಸೂರು,ನ.11:- ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಟನೇ ವರ್ಷದ ಪದವಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿತ್ತು.

8ನೇ ಪದವಿ ಪ್ರದಾನ ಸಮಾರಂಭದಲ್ಲಿ ಜೆ.ಎಸ್.ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟ್ ಸೂರ್ ಮಟ್ ಅವರು  2016-17 ನೇ ವರ್ಷದ ಪದವಿ ಹಾಗೂ ಸ್ನಾತಕೋತ್ತರ  ಪದವಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ರ್ಯಾಂಕ್ ಪಡೆದ  ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 28 ಪದಕ ಹಾಗೂ 14 ದತ್ತಿ ಪದಕ ಸೇರಿದಂತೆ ಒಟ್ಟು 42 ಪದಕಗಳನ್ನು ವಿದ್ಯಾರ್ಥಿಗಳು ತಮ್ಮ ಮುಡಿಗೇರಿಸಿಕೊಂಡರು. ಸಮಾರಂಭದಲ್ಲಿ  ಓಲ್ವೋ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಐಐನ ಅಧ್ಯಕ್ಷರಾದ ಕಮಲ್  ಬಾಲಿ ಪದಕ ಪಡೆದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭ  ಜೆಎಸ್ ಎಸ್ ವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ಸಲಹೆಗಾರ ಪ್ರೊ.ಎಂ.ಹೆಚ್.ಧನಂಜಯ್, ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಜಿ.ಸಂಗಮೇಶ್ವರ್, ತಾಂತ್ರಿಕ ಶಿಕ್ಷಣ ವಿಭಾಗದ ಶೈಕ್ಷಣಿಕ ಮತ್ತು ಆಡಳಿತ ನಿರ್ದೇಶಕ ಡಾ.ಸಿ.ರಂಗನಾಥಯ್ಯ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: