ಮೈಸೂರು

ಆರ್.ಬಿ.ಐ. ಘಟಕಕ್ಕೆ ಹೆಚ್ಚಿನ ಭದ್ರತೆ

ಮೈಸೂರಿನಲ್ಲಿ 2000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡುತ್ತಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಘಟಕಕ್ಕೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಕೇಂದ್ರ ಸರ್ಕಾರ ಮಂಗಳವಾರ ಮಧ್ಯರಾತ್ರಿಯಿಂದಲೇ 500 ಹಾಗೂ 1000 ಮುಖಬೆಲೆಯ ನೋಟುಗಳ ಚಲಾವಣೆಗೆ ನಿಷೇಧಿಸಿತ್ತು. ಅದಕ್ಕೆ ಪರ್ಯಾಯವಾಗಿ 500 ಹಾಗೂ 2000 ಮುಖಬೆಲೆಯ ನೋಟುಗಳನ್ನು ಹೊಸರೂಪದಲ್ಲಿ ಚಲಾವಣೆಗೆ ತರಲು ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಮೈಸೂರಿನ ಆರ್.ಬಿ.ಐ ಮುದ್ರಣ ಘಟಕ 2000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡುತ್ತಿದೆ.

ಇದೀಗ ನೋಟು ಮುದ್ರಣ ಘಟಕಕ್ಕೆ ಕೇಂದ್ರೀಯ ಕೈಗಾರಿಕಾ ಪಡೆಯನ್ನು ರಕ್ಷಣೆಗಾಗಿ ನಿಯೋಜನೆ ಮಾಡಿದ್ದು ಗುರುವಾರದಿಂದಲೇ ಭದ್ರತೆ ಹೆಚ್ಚಿಸಲಾಗಿದೆ ಎಂದು ಆರ್.ಬಿ.ಐ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

comments

Related Articles

error: