ಕ್ರೀಡೆದೇಶಪ್ರಮುಖ ಸುದ್ದಿ

ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ಬಿಸಿಸಿಐ ನಿಂದ ಸಿಹಿ ಸುದ್ದಿ.!

ನವದೆಹಲಿ,ನ.13-ಭಾರತ ಕ್ರಿಕೆಟ್ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಭಾರತ ತಂಡ ದೇಶಿಯ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸಲು ಸಮ್ಮತಿಸಿದೆ.

ಕ್ರಿಕೆಟ್ ತಂಡ ಸಾಮಾನ್ಯ ಕ್ಲಾಸ್ ನಲ್ಲಿ ಪ್ರಯಾಣಿಸುವಾಗ ಸಹ ಪ್ರಯಾಣಿಕರು ಸೆಲ್ಫಿ ತೆಗೆದುಕೊಳ್ಳಲು ಮುಗಿಬೀಳುತ್ತಾರೆ. ಇದರಿಂದ ತಮಗೆ ಮುಜುಗರವಾಗುತ್ತದೆ ಎಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಬಿಸಿಸಿಐ ಗೆ ತಿಳಿಸಿದ್ದರು. ಆಟಗಾರರಿಗೆ ಆಗುತ್ತಿರುವ ತೊಂದರೆಯನ್ನು ಮನಗಂಡ ಬಿಸಿಸಿಐ ಆಟಗಾರರು ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸಲು ಸಮ್ಮತಿ ಸೂಚಿಸಿದೆ.

ದೆಹಲಿಯಲ್ಲಿ ನಡೆದ ಸುಪ್ರೀಂಕೋರ್ಟ್ ನೇಮಿಸಿರುವ ನಿರ್ವಾಹಕ ಸಮಿತಿ(ಸಿಒಎ) ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸಿಕೆ ಖನ್ನಾ ಹೇಳಿದ್ದಾರೆ. (ವರದಿ-ಎಂ.ಎನ್)

 

Leave a Reply

comments

Related Articles

error: