ಮೈಸೂರು

ಸಿಎಂ ಭೇಟಿ ಮಾಡಿದ ಮಾಜಿ ಸಂಸದೆ ರಮ್ಯಾ

ಮಾಜಿ ಸಂಸದೆ, ನಟಿ ರಮ್ಯಾ ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಿಢೀರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮೈಸೂರಿನ ಟಿ.ಕೆ. ಬಡಾವಣೆಯಲ್ಲಿನ ಮುಖ್ಯಮಂತ್ರಿ ನಿವಾಸಕ್ಕೆ ರಾತ್ರಿ ಭೇಟಿ ನೀಡಿದ ರಮ್ಯಾ ಸಿಎಂ ಜೊತೆ ಕೆಲಹೊತ್ತು ಮಾತುಕತೆ ನಡೆಸಿದರು. ಸಚಿವ ಅಂಬರೀಷ್ ಅವರು ಮಂಡ್ಯ ರಾಜಕಾರಣದಿಂದ ದೂರ ಸರಿದಿದ್ದು, ರಮ್ಯಾ ಅವರು ಅಲ್ಲೇ ಮನೆ ಮಾಡಿ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಈ ನಿಟ್ಟಿನಲ್ಲಿ ರಮ್ಯಾ-ಸಿಎಂ ಭೇಟಿ ಮಹತ್ವ ಪಡೆದುಕೊಂಡಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೀನಿವಾಸ್ ಪ್ರಸಾದ್ ಅವರು ಶೀಘ್ರದಲ್ಲೇ ಅಂಬರೀಷ್ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದ್ದರು. ಒಂದು ವೇಳೆ ಅಂಬರೀಷ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಕ್ಷದಲ್ಲಿ ರಮ್ಯಾ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Leave a Reply

comments

Related Articles

error: