ಸುದ್ದಿ ಸಂಕ್ಷಿಪ್ತ
ನ. 14: ಡೇನಲ್ಮ್ ಯೋಜನೆ ಕುರಿತು ಕಾರ್ಯಾಗಾರ
ಚಾಮರಾಜನಗರ, ನ. 13 :- ಡೇನಲ್ಮ್ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಹಾಗೂ ನಿಯಂತ್ರಣ ಅಧಿನಿಯಮ ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರವು ನವೆಂಬರ್ 14ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಾಗಾರದಲ್ಲಿ ಡೇನಲ್ಮ್ ಯೋಜನೆಯಡಿ ರಚಿಸಲಾಗಿರುವ ಪಟ್ಟಣ ವ್ಯಾಪಾರ ಸಮಿತಿ ಸದಸ್ಯರು, ನಗರ ಸ್ಥಳೀಯ ಸಂಸ್ಥೆ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಯೋಜನೆಯ ಅನುಷ್ಠಾನದ ಪಾಲುದಾರರು ಭಾಗವಹಿಸುವರೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. (ಆರ್.ವಿ.ಎಸ್,ಎಸ್.ಎಚ್)