ಸುದ್ದಿ ಸಂಕ್ಷಿಪ್ತ

ನ.14ಕ್ಕೆ ಜನ ಸಂಪರ್ಕ ಸಭೆ

ಮಡಿಕೇರಿ,ನ.13-ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ  ನಿವಾರಿಸುವ ಸಭೆಯು ನ.14 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ವಿರಾಜಪೇಟೆ  ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ವೃತ್ತ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು.

ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ  ವಿದ್ಯುಚ್ಛಕ್ತಿಗೆ ಸಂಬಂಧಿಸಿದ  ಸಮಸ್ಯೆ  ಅಥವಾ ದೂರುಗಳು ಇದ್ದಲ್ಲಿ  ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು.  ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: