ಮೈಸೂರು

ನವೆಂಬರ್ 14 ರಂದು ವಸ್ತುಪ್ರದರ್ಶನ : ಮಕ್ಕಳಿಗೆ ಉಚಿತ ಪ್ರವೇಶ

ಮೈಸೂರು (ನ.14): ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ನವೆಂಬರ್ 14 ರಂದು “ಮಕ್ಕಳ ದಿನಾಚರಣೆಯ” ಪ್ರಯುಕ್ತ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಸ್ತುಪ್ರದರ್ಶನ ವೀಕ್ಷಿಸಲು ಬರುವ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.

ಮಕ್ಕಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿ ಮಕ್ಕಳ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: