ಕರ್ನಾಟಕಮೈಸೂರು

ಬರಪೀಡಿತ ಪ್ರದೇಶಗಳಲ್ಲಿ ಇಂದಿನಿಂದ ಸಿಎಂ ಪ್ರವಾಸ

ಬರಪೀಡಿತ ಪ್ರದೇಶಗಳಲ್ಲಿ  ಇಂದಿನಿಂದ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಈ ವೇಳೆ ಬರದಿಂದ ಆಗಿರುವ ನಷ್ಟದ ಅಂದಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ  ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಈ ಬಾರಿ ಮಳೆಯ ಅಭಾವದಿಂದ ಬೆಳೆ ಇಲ್ಲದೇ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಬರಪೀಡಿತ ಪ್ರದೇಶಗಳಿಗೆ ಇಂದಿನಿಂದ ಭೇಟಿ ನೀಡಿ ರೈತರ ಕೃಷಿಭೂಮಿಗಳಲ್ಲಿ ಎಷ್ಟು ಬೆಳೆ ನಷ್ಟವಾಗಿದೆ ಎನ್ನುವ ಅಂದಾಜಿನ ವಿವರಣೆ ಪಡೆಯಲಿದ್ದೇನೆ ಎಂದರು.

ಪೊಲೀಸರ ವೇತನ ಪರಿಷ್ಕರಣೆ ಕುರಿತ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಪೊಲೀಸರ ವೇತನ ಹೆಚ್ಚಳ ಸಂಬಂಧ ಆರ್ಥಿಕ ಇಲಾಖೆಗೆ ವರದಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಪೊಲೀಸರ ವೇತನ ಪರಿಷ್ಕರಣೆ ಸಂಬಂಧಪಟ್ಟಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ತಮ್ಮ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದಾರೆ ಎಂಬ ವರದಿ ಕುರಿತಂತೆ ಮಾಧ್ಯಮಗಳಲ್ಲಿ ಬಂದ ವರದಿ ಸುಳ್ಳು ಎಂದು ಹೇಳಿದ್ದೀರಲ್ಲಾ ಎಂದು ಕೇಳಿದಾಗ ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ  ಬಿತ್ತರವಾಗಿರುವ ವರದಿ ಸುಳ್ಳು ಎಂದು ನಾನು ಎಲ್ಲಿಯೂ ಹೇಳಿಲ್ಲ. ಅವರಿಂದ ವರದಿ ಕೇಳಿದ್ದೇನೆ. ಅವರು ನೀಡುವ ವರದಿ ಪರಿಶೀಲಿಸಿ ವಿಚಾರಣೆ ಮಾಡಬೇಕೋ, ಬೇಡವೋ ಎಂದು ತೀರ್ಮಾನಿಸುತ್ತೇನೆ ಎಂದು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

Leave a Reply

comments

Related Articles

error: