ಕರ್ನಾಟಕಪ್ರಮುಖ ಸುದ್ದಿ

ಮಕ್ಕಳನ್ನು ದೇಶದ ಉತ್ತಮ ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ಪೋಷಕರ ಮೇಲಿದೆ : ವಜುಭಾಯಿ ವಾಲಾ

ರಾಜ್ಯ(ಬೆಂಗಳೂರು)ನ.14:- ಮಕ್ಕಳನ್ನು ದೇಶದ ಉತ್ತಮ ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ಮತ್ತು ಪ್ರತಿಯೊಂದು ಕ್ಷೇತ್ರದಲ್ಲಿಯೂ ಅವರನ್ನು ಪ್ರೋತ್ಸಾಹಿಸುವುದು ಪೋಷಕರ ಕರ್ತವ್ಯ ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು.

ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ-2017 ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಅನೇಕ ಮಕ್ಕಳಿಗೆ ಜ್ಞಾಪನ ಶಕ್ತಿ ಬಹಳ ಚುರುಕಾಗಿರುತ್ತದೆ. ಆದರೆ ಅಂತಹ ಮಕ್ಕಳಿಗೆ ಅವರು ಇಚ್ಛಸುವ ಕ್ಷೇತ್ರಗಳಲ್ಲಿ ಗುರಿ ಸಾಧಿಸಲು ಸರಿಯಾದ ಅವಕಾಶಗಳು ದೊರೆಯುತಿಲ್ಲ. ಅಂಥಹವರಿಗೆ ನಾವು ಉತ್ತಮ ದಾರಿಯನ್ನು ತೋರಿಸುವ ಕೆಲಸ ಮಾಡಬೇಕು ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ಮಾತನಾಡಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿಯನ್ನು ವಹಿಸಲಾಗುತ್ತಿದೆ. ಅವರಿಗೆ ಉತ್ತಮ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ, ಗರ್ಭಿಣಿ ಸ್ತ್ರೀಯರಿಗೆ ಕೂಡ ಪೌಷ್ಠಿಕ ಆಹಾರವನ್ನು ಪಡೆಯುವಂತೆ ಸೂಚಿಸಲಾಗಿದೆ. ಮಕ್ಕಳನ್ನು ದೈಹಿಕವಾಗಿ ಉತ್ತಮಗೊಳಿಸಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು. ರಾಜ್ಯಪಾಲರು ಮಕ್ಕಳ ದಿನಾಚರಣೆಯ ಬಾವುಟ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಧೈರ್ಯ ಸಾಹಸ ಪ್ರದರ್ಶಿಸಿ, ಸಮಯ ಪ್ರಜ್ಞೆಯಿಂದ ಇತರರ ಪ್ರಾಣವನ್ನು ಅಪಾಯದಿಂದ ರಕ್ಷಿಸಿದಂತಹ ಒಟ್ಟು 7 ಜನ ಮಕ್ಕಳಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದರು. ಸಚಿವೆ ಉಮಾಶ್ರೀ ಕ್ರೀಡೆ, ಕಲಾ, ಸಂಗೀತ, ಸಮಾಜ ಸೇವೆ ಹಾಗೂ ಇತರೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ ಒಟ್ಟು 35 ಮಕ್ಕಳಿಗೆ ಪ್ರತಿಭಾ ಪುರಸ್ಕಾರ, 4 ಸ್ವಯಂ ಸೇವ ಸಂಸ್ಥೆಗಳಿಗೆ ಹಾಗೂ ನಾಲ್ವರಿಗೆ ವೈಯುಕ್ತಿಕ ಪ್ರಶಸ್ತಿಯನ್ನು ನೀಡಿದರು.

ಸಮಾರಂಭದಲ್ಲಿ ಲೋಕಸಭಾ ಸದಸ್ಯ ಪಿ.ಸಿ.ಮೋಹನ್,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ ಎಂ.ದೀಪ,  ಬಾಲಭವನ ಸೊಸೈಟಿಯ ಅಧ್ಯಕ್ಷೆ ಡಾ. ಅಂಜಲಿ ನಿಂಬಾಳ್ಕರ್ ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: