ಮೈಸೂರು

ಅನುಮಾನಾಸ್ಪದ ಸಾವು : ಕೊಲೆ ಶಂಕೆ

ಮೈಸೂರು,ನ.15:- ರಸ್ತೆ ಬದಿಯಲ್ಲಿ ವ್ಯಕ್ತಿಯೋರ್ವರು  ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.

ಅರಣ್ಯ ಇಲಾಖೆಯಲ್ಲಿ ಕರ್ತವ್ಯದಲ್ಲಿರುವ ಕೆಂಪರಾಜು(50)ಎಂಬವರೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಅವರು  ರಾತ್ರಿ ಮನೆಯಲ್ಲಿ ಊಟ ಮುಗಿಸಿ ಕರ್ತವ್ಯಕ್ಕೆ ತೆರಳಿದಾಗ ಸರಗೂರು‌ ಬಳಿ ತಲೆಗೆ ತೀವ್ರಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ. ಎಚ್.ಡಿ.ಕೋಟೆ ತಾಲೂಕಿನ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: