ಕ್ರೀಡೆಮೈಸೂರು

ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ನಲ್ಲಿ ಚಿನ್ನ, ಬೆಳ್ಳಿ ಗೆದ್ದ ಮೈಸೂರಿನ ಮಧುಸೂಧನ್

ಮೈಸೂರು,ನ.15-ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನ ನೌಕರರಾದ ಡಿ.ಮಧುಸೂಧನ್ ಇತ್ತೀಚೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆದ ಮೂರು ದಿನಗಳ ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2017ರಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.

ಕಠ್ಮಂಡುವಿನಲ್ಲಿ ಅ.28 ರಿಂದ 30 ರವರೆಗೆ ನಡೆದ ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಶಾಟ್ ಪುಟ್ ಮತ್ತು ಡಿಸ್ಕಸ್ ಥ್ರೋ ಬಾಲ್ ಸ್ಪರ್ಧೆಗಳಲ್ಲಿ ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ರಾಜ್ಯದಿಂದ 18 ಅಂಗವೈಕಲ್ಯ ಉತ್ಸಾಹಿ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಎಸ್ ಜೆಸಿಇ ಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳನ್ನು ಇವರನ್ನು ಅಭಿನಂದಿಸಿದ್ದಾರೆ. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: