ಮೈಸೂರು

ಶಿಕ್ಷಣ ಸಚಿವರನ್ನು ಸಂಪುಟದಿಂದ ಕೈ ಬಿಡಿ

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಮೈಸೂರು ನಗರ ಭಾರತೀಯ ಜನತಾಪಕ್ಷದ ವತಿಯಿಂದ ಧರಣಿ ಸತ್ಯಾಗ್ರಹ ನಡೆಯಿತು.

ಮೈಸೂರಿನ ಗಾಂಧಿವೃತ್ತದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಶಿಕ್ಷಣ ಸಚಿವ ತನ್ವೀರ್ ಸೇಠ್  ವಿರುದ್ಧ ಘೋಷಣೆಗಳನ್ನು ಕೂಗಿದರು. ಸಭಾ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಚಿವರು ನೀಲಿ ಚಿತ್ರವನ್ನು ವೀಕ್ಷಿಸಿದ್ದು, ಸಚಿವರದ್ದು ಇದೆಂತಹ ಸಂಸ್ಕೃತಿ. ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಸರ್ಕಾರ ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಬಿ.ಎಚ್.ಮಂಜುನಾಥ, ವಿಜಯಶಂಕರ, ಹೆಚ್.ರಾಜೀವ್ ಹಾಗೂ 200ಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

 

Leave a Reply

comments

Related Articles

error: