ಸುದ್ದಿ ಸಂಕ್ಷಿಪ್ತ

ನ. 20ರಿಂದ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ನ. 15: – ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 20ರಿಂದ ಜಿಲ್ಲೆಯ ನಾಲ್ಕೂ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ನಾಗರಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ನವೆಂಬರ್ 20ರಂದು ಕೊಳ್ಳೇಗಾಲ, 21ರಂದು ಯಳಂದೂರು, 24ರಂದು ಚಾಮರಾಜನಗರ, 25ರಂದು ಗುಂಡ್ಲುಪೇಟೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ಕೊಡುವರು. ನಿಗದಿತ ದಿನಾಂಕದಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿ ಗೃಹದಲ್ಲಿ ಅಧಿಕಾರಿಗಳು ಹಾಜರಿರುತ್ತಾರೆ. ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ವಿಳಂಬ ಇತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ನಾಗರಿಕರು ನಮೂನೆ 1 ಹಾಗೂ 2ರಲ್ಲಿ ಭರ್ತಿ ಮಾಡಿದ ಹಾಗೂ ಅಫಿಟವಿಟ್ ಮಾಡಿಸಿ ಅರ್ಜಿ ನೀಡಬಹುದು. ಲೋಕಾಯುಕ್ತ ಅಧಿಕಾರಿಗಳ ಭೇಟಿ ಕಾರ್ಯಕ್ರಮವನ್ನು ನಾಗರಿಕರು ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ಕೋರಿದ್ದಾರೆ. (ಆರ್.ವಿ.ಎಸ್,ಎಸ್.ಎಚ್)

Leave a Reply

comments

Related Articles

error: