ಮೈಸೂರು

ಕ್ರಿಸ್‍ಮಸ್ ಪ್ರಯುಕ್ತ ಗಾಯನ ಸ್ಪರ್ಧೆ, ಪ್ರತಿಭಾ ಪುರಸ್ಕಾರ

ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ಮೈಸೂರಿನ ಕೆಥೋಲಿಕ್ ಸಂಘದಿಂದ ಹನ್ನೆರಡನೇ ವರ್ಷದ ಕ್ರಿಸ್‍ಮಸ್ ಗಾಯನ ಸ್ಪರ್ಧೆ ಹಾಗೂ ಪ್ರತಿಭಾ ಪುರಸ್ಕಾರವನ್ನು ಆಯೋಜಿಸಲಾಗಿದೆ ಎಂದು ಆರೋಗ್ಯದಾಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿ.4ರ ಭಾನುವಾರ ಬೆಳಗ್ಗೆ 9 ಗಂಟೆಗೆ  ಎಫ್.ಟಿ.ಎಸ್. ವೃತ್ತದ ಸಂತ ಫಿಲೋಮಿನಾ ಪ್ರೌಢಶಾಲೆ ಸಭಾಂಗಣದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, 200 ರೂಪಾಯಿ ಪ್ರವೇಶದರ ನಿಗದಿಗೊಳಿಸಲಾಗಿದೆ. ಕನ್ನಡ, ಇಂಗ್ಲಿಷ್ ಹಾಗೂ ಇತರ ಪ್ರಾದೇಶಿಕ ಭಾಷೆಗಳಲ್ಲಿ ಹಾಡಬಹುದು. ಐದು ಹಂತಗಳಲ್ಲಿ ಸ್ಪರ್ಧೆಯನ್ನು ನಡೆಸಲಾಗುವುದು, ಈಗಾಗಲೇ ಮೈಸೂರಿನ ಶಾಲಾ, ಕಾಲೇಜುಗಳಿಗೆ ಸಂದೇಶವನ್ನು ಕಳುಹಿಸಲಾಗಿದೆ. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಸಂದರ್ಭದಲ್ಲಿ ನಡೆಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಕೆಥೋಲಿಕ್ ಅಸೋಸಿಯೇಷನ್ ಆಫ್ ಮೈಸೂರು ಅಧ್ಯಕ್ಷ ಅಲೆಕ್ಸಾಂಡರ್ ವಿನ್ಸಂಟ್ , ಹೇಮಾವತಿ ಹಾಗೂ ಇತರರು ಹಾಜರಿದ್ದರು. ಹೆಚ್ಚಿನ ಮಾಹಿತಿಗಾಗಿ 9740792662 ಹಾಗೂ 9448177452 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: