ಸುದ್ದಿ ಸಂಕ್ಷಿಪ್ತ

ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಕ್ರೀಡಾಕೂಟ     

ಮೈಸೂರು, ನ.16:-  ಮೈಸೂರು ವಿಶ್ವ ವಿಕಲಚೇತನರ ದಿನಾಚರಣೆ 2017ರ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಎಲ್ಲಾ ವಿಧದ ವಿಕಲಚೇತನರಿಗೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ. ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ನವೆಂಬರ್ 27 ರಂದು ಬೆಳಿಗ್ಗೆ 9 ಘಂಟೆಯಿಂದ ಚಾಮುಂಡಿ ವಿಹಾರ ಕ್ರೀಡಾಂಗಣ, ಮೈಸೂರು ಇಲ್ಲಿ ಏರ್ಪಡಿಸಲಾಗಿದ್ದು, ಆಸಕ್ತ ಕ್ರೀಡಾಪಟುಗಳು  ದಿನಾಂಕ:25.11.2017ರೊಳಗಾಗಿ ಕಿವುಡ ಮಕ್ಕಳ ಸರ್ಕಾರಿ ಪಾಠಶಾಲೆ, ತಿಲಕ್ ನಗರ, ಮೈಸೂರು ಇಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಸ್ಪ ಹೆಚ್ಚಿನ ಮಾಹಿತಿಗೆ ದೂರವಾಣಿ  ಸಂಖ್ಯೆ: 0821-2494104, 0821-2490111, 0821-2490222ಯನ್ನು ಸಂಪರ್ಕಿಸಬಹುದಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: