ಸುದ್ದಿ ಸಂಕ್ಷಿಪ್ತ

ನ.24 ರಂದು ಸುಬ್ರಮಣ್ಯೇಶ್ವರ ಸ್ವಾಮಿ ಜಾತ್ರೆ

ಮೈಸೂರು.ನ.16.:- ಮೈಸೂರು ತಾಲೂಕಿನ ಕಸಬಾ ಹೋಬಳಿಯ ಸಿದ್ದಲಿಂಗಪುರ ಗ್ರಾಮದಲ್ಲಿ ಸುಬ್ರಮಣ್ಯೇಶ್ವರ ಸ್ವಾಮಿ ಷಷ್ಟಿ ಜಾತ್ರೆಯು ನವೆಂಬರ್ 24 ರಂದು ನಡೆಯಲಿದೆ.
ಭಕ್ತಾದಿಗಳ ಸರಕ್ಷತೆಗೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕರ್ತವ್ಯಕ್ಕೆ ನೇಮಿಸಲಾಗಿದೆ. ಉಚಿತ ಪ್ರಸಾದ ವಿನಿಯೋಗಿಸುವವರು ಮೈಸೂರು ತಾಲ್ಲೂಕು ಕಚೇರಿಯಲ್ಲಿ ಹೆಸರು ನೋಂದಾಹಿಸಿಕೊಳ್ಳುವಂತೆ ಮೈಸೂರು ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

Check Also

Close
error: