ಮೈಸೂರು

ದೇಗುಲದ ಅರ್ಚಕರ ಬರ್ಬರ ಹತ್ಯೆ

ಮೈಸೂರು,ನ.17:- ದೇಗುಲದ ಅರ್ಚಕರೋರ್ವರನ್ನು ಯಾರೋ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಕಳೆದ ತಡರಾತ್ರಿ ನಡೆದಿದೆ.

ಬದನವಾಳು ಗ್ರಾಮದ ಚಾಮುಂಡೇಶ್ವರಿ ದೇಗುಲದ ಅರ್ಚಕರನ್ನು ಹತ್ಯೆಗೈದ ಬಳಿಕ ಬೇಲಿಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: