ಮೈಸೂರು

ವರದಕ್ಷಿಣೆ ಕಿರುಕುಳ ನೀಡಿ ಪತ್ನಿ ಕೊಲೆ ಮಾಡಿದ್ದ ಪತಿಗೆ ಏಳು ವರ್ಷ ಜೈಲು

ಮೈಸೂರು,ನ.18:- ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಏಳನೇ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಆದೇಶ ನೀಡಿದೆ.

ಪತ್ನಿ ಅಮೀನಾ ಖಾತೂನ್   ಕೊಲೆ ಮಾಡಿದ್ದ ತಜ್ಮಲ್ ಅಹಮದ್ ಖಾನ್ ಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ 13000 ದಂಡ ವಿಧಿಸಿ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹೆಚ್ ಡಿ ಆನಂದ್ ಕುಮಾರ್ ವಾದ ಮಂಡಿಸಿದ್ದರು. ವಾದ ವಿವಾದ ಆಲಿಸಿ ನ್ಯಾಯಾಧೀಶ ವಿಜಯ್ ಕುಮಾರ್ ಎಂ ಆನಂದ ಶೆಟ್ಟಿ ಶಿಕ್ಷೆ ಪ್ರಕಟಿಸಿದ್ದಾರೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: