ಮೈಸೂರು

ಸದ್ಯಕ್ಕೆ ಮಳೆ ಇಲ್ಲ

ಮೈಸೂರು ವಿಭಾಗದ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಮಳೆ ಸಾಧ‍್ಯತೆ ಇಲ್ಲ ಎಂದು ನಾಗನಹಳ್ಳಿಯ ಗ್ರಾಮೀಣ ಕೃಷಿ ಹವಾಮಾನ ಸೇವಾ ವಿಭಾಗ ತಿಳಿಸಿದೆ.

ಮುನ್ಸೂಚನೆ ಪ್ರಕಾರ ನವೆಂಬರ್ 12 ರಿಂದ 16 ರವರೆಗೆ ಈ ನಾಲ್ಕು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಬರುವ ಸಾಧ್ಯತೆ ಇಲ್ಲ.  ಗರಿಷ್ಠ ಉಷ್ಣಾಂಶ 29-30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 16-17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಕೊಡಗಿನಲ್ಲಿ ಗರಿಷ್ಠ ಉಷ್ಣಾಂಶ 28-29 ಮತ್ತು ಕನಿಷ್ಠ 15-16 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ನಾಗನಹಳ್ಳಿ ಕೃಷಿ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕರು ತಿಳಿಸಿದ್ದಾರೆ.

Leave a Reply

comments

Related Articles

error: