
ಮೈಸೂರು
ಲಾರಿ-ಬೈಕ್ ಡಿಕ್ಕಿ : ಯುವಕ ಸಾವು
ಮೈಸೂರು,ನ.21:- ಲಾರಿ-ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೆ.ಆರ್.ನಗರದ ಹಳೆ ಯಡತೊರೆ ಅರ್ಕೇಶ್ವರಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.
ಮೃತನನ್ನು ತಾಲೂಕಿನ ಚಿಕ್ಕವಡ್ಡರಗುಡಿ ಗ್ರಾಮದ ದಿ.ಲೋಕನಾಥ್ ಅವರ ಮಗ ಬಾಬು(26) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಕೆ.ಆರ್.ನಗರದಿಂದ ಚಿಕ್ಕವಡ್ಡರಗುಡಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)