ಮೈಸೂರು

ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳು ಸಂವಹನ ಕೌಶಲ್ಯ ವೃದ್ಧಿಗೆ ಸಹಕಾರಿ: ಡಾ.ಎಸ್.ಶ್ರೀಕಂಠಸ್ವಾಮಿ

ಟಿಟಿಎಲ್ ಕಾಲೇಜಿನ ಬ್ಯುಸಿನೆಸ್ ಮ್ಯಾನೆಜ್ ಮೆಂಟ್ ವಿಭಾಗದ ವತಿಯಿಂದ ಶನಿವಾರದಂದು ವ್ಯಕ್ತಿತ್ವ ವಿಕಸನದ ಮೇಲೆ ಒಂದು ದಿನದ ರಾಜ್ಯಮಟ್ಟದ ಬೋಧನಾ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮೈಸೂರು ವಿವಿಯ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಡಾ.ಎಸ್.ಶ್ರೀಕಂಠಸ್ವಾಮಿ ಮಾತನಾಡಿ, ವ್ಯಕ್ತಿತ್ವ ಯಾವಾಗಲೂ ಸಮಾಜದಲ್ಲಿ ಪ್ರತಿಬಿಂಬಿಸುವಂತದ್ದು. ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳು ನಮ್ಮ ಸಂವಹನ ಕೌಶಲ್ಯಗಳನ್ನು ಬೆಳೆಸುತ್ತವೆ. ಅಂತರವ್ಯಕ್ತೀಯ ಸಂಬಂಧ ಹಾಗೂ ನಡವಳಿಕೆ ಮುಖ್ಯವಾದುದು. ಇವುಗಳು ಸಕಾರಾತ್ಮಕ ವ್ಯಕ್ತಿತ್ವವನ್ನು ಬೆಳೆಸುತ್ತವೆ. ಸಮಯ ನಿರ್ವಹಣೆ ಮತ್ತು ಒತ್ತಡ ನಿರ್ವಹಣಾ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಪೋರೇಟ್ ತರಬೇತುದಾರರಾದ ಶಶಿಕಲಾ ಮಧುಸೂದನ್ ಆಗಮಿಸಿದ್ದರು. ಕಾರ್ಯದರ್ಶಿ ಎಚ್.ಎನ್. ಅಶ್ವಥ್ ನಾರಾಯಣ ಅಧ್ಯಕ್ಷೀಯ ನುಡಿಗಳನ್ನಾಡಿದರು. ಟಿಟಿಎಲ್ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೀತಿ, ಮಾರುತಿ ಪ್ರಸನ್ನ ಬಿ.ಎನ್ ಉಪಸ್ಥಿತರಿದ್ದರು.

Leave a Reply

comments

Related Articles

error: