ಮೈಸೂರು

ಸಚಿವರನ್ನು ಸಂಪುಟದಿಂದ ಕೈಬಿಡಬೇಡಿ: ಪ್ರತಿಭಟನೆ

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ತನ್ವೀರ್ ಸೇಠ್ ಅವರು ಯಾವುದೇ ತಪ್ಪನ್ನು ಮಾಡಿಲ್ಲ. ಆವರ ಮೇಲೆ ವೃಥಾ ಆರೋಪ ಮಾಡಲಾಗುತ್ತಿದೆ. ಅವರನ್ನು ಸಂಪುಟದಿಂದ ಕೈಬಿಡಬೇಡಿ ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ಉದಯಗಿರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಚಿವರ ತೇಜೋವಧೆ ಮಾಡಲು ವ್ಯವಸ್ಥಿತ ಹುನ್ನಾರ ನಡೆಸಲಾಗುತ್ತಿದೆ. ಸಚಿವರು ಯಾವುದೇ ತಪ್ಪನ್ನು ಮಾಡಿಲ್ಲ ಎಂದರಲ್ಲದೇ ಆರೋಪಿಸಿದವರ ವಿರುದ್ಧ ಘೋಷಣೆ ಕೂಗಿದರು.

ಪೊಲೀಸರು ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

Leave a Reply

comments

Related Articles

error: