ಕರ್ನಾಟಕ

ಬಾಗಲಕೋಟೆ-ಕುಡಿಚಿ ರೈಲು ಮಾರ್ಗಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣ: ದೇಶಪಾಂಡೆ

ಬೆಳಗಾವಿ, ಸುವರ್ಣ ವಿಧಾನಸೌಧ (ನ.23): ಬಾಗಲಕೋಟೆ-ಕುಡಿಚಿ ರೈಲು ಮಾರ್ಗಕ್ಕೆ ಈಗಾಗಲೇ 576 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಇನ್ನೂ 1905 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಅವರು ವಿಧಾನಸಭೆಯಲ್ಲಿ ಬುಧವಾರ ತಿಳಿಸಿದರು.

ಸದಸ್ಯ ಉಮೇಶ ಕತ್ತಿ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಈ ಯೋಜನೆಯ ಒಟ್ಟಾರೆ 2481 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದೆ ಎಂದರು.

141 ಕಿ.ಮೀ ಉದ್ದದ ಈ ರೈಲು ಮಾರ್ಗ ನಿರ್ಮಾಣಕ್ಕೆ ಅಂದಾಜು 816 ಕೋಟಿ ರೂ ಅವಶ್ಯವಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಯೋಗದಲ್ಲಿ ಈ ಯೋಜನೆಯನ್ನು ಅನಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ ಪಾಲು 408 ಕೋಟಿ ರೂ, ಪೈಕಿ ಈಗಾಗಲೇ 146 ಕೋಟಿ ರೂ, ಹಾಗೂ ಭೂಸ್ವಾಧೀನಕ್ಕಾಗಿ 208 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸದಸ್ಯ ಸಿದ್ದು ನ್ಯಾಮೆಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.

(ಎನ್‍ಬಿಎನ್‍)

Leave a Reply

comments

Related Articles

error: