ಮೈಸೂರು

ರಾಜಶೇಖರ ಕೋಟಿಯವರ ಅಗಲಿಕೆಗೆ ಸುತ್ತೂರು ಜಾತ್ರಾ ಮಹೋತ್ಸವ ಸಮಿತಿ ಸಂತಾಪ

ಮೈಸೂರು,ನ.23:-  ಹೃದಯಾಘಾತದಿಂದ ಅಗಲಿದ ಹಿರಿಯ ಪತ್ರಕರ್ತ ಹಾಗೂ ಆಂದೋಲನ ದಿನಪತ್ರಿಕೆಯ ಸಂಪಾದಕ ರಾಜಶೇಖರ ಕೋಟಿಯವರ ಆತ್ಮಕ್ಕೆ ಶಾಂತಿ ಹಾರೈಸಿ ಸುತ್ತೂರು ಜಾತ್ರಾ ಮಹೋತ್ಸವ ಸಮಿತಿ ಸಂತಾಪ ಸೂಚಿಸಿದೆ.

ಇಂದು ಸುತ್ತೂರು ಶ್ರೀಕ್ಷೇತ್ರದಲ್ಲಿ ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ನೆರವೇರಿದ ಜಾತ್ರಾ ಮಹೋತ್ಸವ ಸಮಿತಿಯಲ್ಲಿ ರಾಜಶೇಖರ ಕೋಟಿಯವರ ಸೇವೆಯನ್ನು ಸ್ಮರಿಸಲಾಯಿತು. ಕರ್ನಾಟಕದ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅವರ ಕೊಡುಗೆ ಅನನ್ಯವಾದುದು, ಅವರ ಅಗಲಿಕೆಯಿಂದ ಈ ಕ್ಷೇತ್ರಕ್ಕೆ ಭರಿಸಲಾಗದ ನಷ್ಟ ಉಂಟಾಗಿದೆ. ತಮ್ಮ ಸಾಮಾಜಿಕ ಕಳಕಳಿಯಿಂದ ಮೈಸೂರು ಜಿಲ್ಲೆಯಲ್ಲಿ ಅನೇಕ ಜನೋಪಯೋಗಿ ಕಾರ್ಯಗಳನ್ನು ನಿರ್ವಹಿಸಿರುವುದನ್ನು ಹಾಗೂ ದಮನಿತರ ಧ್ವನಿಯಾಗಿ ಸಾಮಾಜಿಕ ನ್ಯಾಯ ಒದಗಿಸಲು ಶ್ರಮಿಸುತ್ತಿದ್ದುದನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಅವರ ಕುಟುಂಬವರ್ಗದವರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ ಎಂದು ಸಭೆಯಲ್ಲಿ ಮೌನಾಚರಣೆ ಮಾಡಿ ಸಂತಾಪ ಸೂಚಿಸಲಾಯಿತು. (ಎಸ್.ಎಚ್)

Leave a Reply

comments

Related Articles

error: