ಮೈಸೂರು

ನ. 24 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು.ನ.24:- ಮುಖ್ಯಮಂತ್ರಿ ಸಿದ್ದರಾಮಯ್ಯ ನ. 24  ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನ. 24 ರಂದು ಬೆಳಿಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ವತಿಯಿಂದ ಆಯೋಜಿಸಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.25 ಕ್ಕೆ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿ ಹೊಸೂರು ಗ್ರಾಮದಲ್ಲಿ ನೂತನವಾಗಿ ಜೀರ್ಣೋದ್ಧಾರಗೋಂಡಿರುವ ಶ್ರೀ ಕಾರ್ಗಳ್ಳಿ ಬಸವೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4.30 ಕ್ಕೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಇವರ ಸಹಯೋಗದೊಂದಿಗೆ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಜೆ.ಎಸ್.ಎಸ್. ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿರುವ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯಮಟ್ಟದ ಸಮ್ಮೇಳನದ ಉದ್ಘಾಟನೆಯನ್ನು ನೆರವೇರಿಸಿ ನಂತರ ಸಂಜೆ 6.30ಕ್ಕೆ ಮೈಸೂರು ವಿಮಾನ ನಿಲ್ದಾಣದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: